HomeEntertainmentವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ

ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕೋವಿಡ್ 3ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಘೋಷಿಸಿದ ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಟ್ಟುನಿಟ್ಟಿನ ಕರ್ಪ್ಯೂ ಪಾಲನೆಯಾಗದ ಹಿನ್ನಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು, ಸರಕಾರಿ ಅಂಗಡಿ, ಬಸ್, ಕಾರು, ರಿಕ್ಷಾ ಸಹಿತ ಖಾಸಗಿ ವಾಹನಗಳ ಸಂಚಾರ ಎಂದಿನಂತೆಯೇ ಇತ್ತು. ಕೆಲವೊಂದು ಅಂಗಡಿ, ಕಚೇರಿಗಳು ಸ್ವಯಂ ಪ್ರೇರಿತರಾಗಿ ಬಂದ್ ಗೊಳಿಸಿ ವೀಕೆಂಡ್ ಕರ್ಪ್ಯೂಗೆ ಬೆಂಬಲ ನೀಡಿದ್ದಾರೆ.
ಮೆಡಿಕಲ್, ದಿನಸಿ, ತರಕಾರಿ ಹಾಲು ಮತ್ತಿತರ ಅಗತ್ಯ ವಸ್ತುಗಳ ಅಂಗಡಿಗಳು ಅಲ್ಲದ ಎಲೆಕ್ಟ್ರಾನಿಕ್ಸ್, ಬಟ್ಟೆ ಮಾರಾಟದ ಅಂಗಡಿಗಳು ಇಂದು ವ್ಯಾಪಾರ ನಡೆಸಿದೆ. ಖಾಸಗಿ ಬಸ್‌ಗಳು ರಸ್ತೆಗಿಳಿಯದ ಪರಿಣಾಮ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು. ರಿಕ್ಷಾ ಪಾರ್ಕ್‌ಗಳಲ್ಲಿ ರಿಕ್ಷಾಗಳ ಸರತಿ ಕಂಡು ಬಂತು. ಹೆದ್ದಾರಿಗಳಲ್ಲಿ ವಾಹನ ಸಂಚಾರ ಸಾಮಾನ್ಯವಾಗಿತ್ತು. ಗ್ರಾಮೀಣ ಭಾಗದ ಜನ ಜೀವನವೂ ಸಹಜವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments