HomeFresh Newsಹೂಗುಚ್ಚ, ಹಾರ, ತುರಾಯಿ ಹಣ್ಣಿನ ಬುಟ್ಟಿ ನಿಷೇಧ ಹಿಂತೆಗುಕೊಳ್ಳುವಂತೆ ಆಗ್ರಹ: ಆಗಸ್ಟ್‌ 12 ರಂದು ಪುಷ್ಪ...

ಹೂಗುಚ್ಚ, ಹಾರ, ತುರಾಯಿ ಹಣ್ಣಿನ ಬುಟ್ಟಿ ನಿಷೇಧ ಹಿಂತೆಗುಕೊಳ್ಳುವಂತೆ ಆಗ್ರಹ: ಆಗಸ್ಟ್‌ 12 ರಂದು ಪುಷ್ಪ ಮಾರಾಟಗಾರರ ಸಂಘದಿಂದ ಪ್ರತಿಭಟನೆ

ಬೆಂಗಳೂರು: ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್‌ ಅವರು ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂದಕ್ಕೆ ತಗೆದುಕೊಳ್ಳಬೇಕು ಎಂದು ಆಗ್ರಹಿಸಲು ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ನಾಳೆ (ಗುರುವಾರ 12 ನೇ ಆಗಸ್ಟ್‌ 2021) ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.

ರಾಜ್ಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶ ರಾಜ್ಯದ ಹೂ ಬೆಳೆಗಾರರು ಹಾಗೂ ರೈತರ ಮೇಲೆ ಗಧಾಪ್ರಹಾರ ವಾಗಿದೆ. ಈ ಆದೇಶವನ್ನು ತಕ್ಷಣ ಹಿಂದಕ್ಕೆ ತಗೆದುಕೊಳ್ಳಬೇಕೆಂದು ಸರಕಾರವನ್ನು ಒತ್ತಾಯಿಸಲು ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ.ಎಂ ಅರವಿಂದ್‌, ನಿರ್ದೇಶಕರಾದ ಶ್ರೀಕಾಂತ್‌ ಬೆಲ್ಲಂಪಳ್ಳಿ, ರಾಜ್ಯದ ಎಲ್ಲಾ ಹೂ ಬೆಳೆಗಾರರರು, ಪುಷ್ಟ ಕೃಷಿ ರೈತ ಸಂಘಟನೆಗಳು ಮತ್ತು ರಾಜ್ಯದ ಎಲ್ಲಾ ಪುಷ್ಟ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘದ ನೇತೃತ್ವದಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯ ಎದುರು (ಬೆಳಿಗ್ಗೆ 11.15 ಕ್ಕೆ), ರಾಜ್ಯದ ಹೂಬೆಳೆಗಾರರು ಹಾಗೂ ರೈತರ ಮತ್ತು ಮಾರಾಟಗಾರರ ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆಯನ್ನು ನಡೆಸಲಾಗುವುದು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments