HomeFresh Newsವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು :...

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು : ಯು.ಟಿ. ಖಾದರ್ 

ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ..? ಎಂದು ಪ್ರಶ್ನಿಸಿದರು. ಮಂಗಳೂರಲ್ಲಿ ಇಂತಹ ಘಟನೆಗಳು ನಡೆಯಲೇಬಾರದಿತ್ತು. ಆದರೆ ಇಂತಹ ಘಟನೆಯನ್ನು ತಡೆಯಲು ಪೊಲೀಸ್ ಇಲಾಖೆ ವಿಫಲವಾಗಿದೆ. ಇಂತಹ ಕೃತ್ಯಗಳನ್ನು ತಡೆಯಲು ಅಥವಾ ಆರೋಪಿಗಳಿಗೆ ಕಠಿಣ ಕ್ರಮ ತೆಗೆದುಕೊಳ್ಳಲು ರಾಜ್ಯದಲ್ಲಿ ಹೊಸ ವ್ಯವಸ್ಥೆ ತರಲಿ. ಯಾರಾರದ್ದೋ ಮಕ್ಕಳಿಗೆ ಹೊಡೆಯಲು ಈ ಲೋಫರ್‌ಗಳು ಯಾರು ಎಂದು ಕಿಡಿಕಾರಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments