HomeFresh Newsಸರ್ವಧರ್ಮದ ಸತ್ವ ನಾರಾಯಣಗುರುಗಳ ತತ್ವ- ಡಾ. ಗಣನಾಥ ಎಕ್ಕಾರು

ಸರ್ವಧರ್ಮದ ಸತ್ವ ನಾರಾಯಣಗುರುಗಳ ತತ್ವ- ಡಾ. ಗಣನಾಥ ಎಕ್ಕಾರು

ಮಲ್ಪೆ : 19ನೇ ಯ ಶತಮಾನದ ದಾರ್ಶನಿಕ, ಮಾನವತಾವಾದಿ, ಬ್ರಹ್ಮಶ್ರೀ ನಾರಾಯಣಗುರುಗಳು ನೀಡಿದ ಸಂದೇಶ ಒಂದು ಕಾಲ, ಜಾತಿ, ಮತ, ಧರ್ಮಕ್ಕೆ ಸೀಮಿತವಾಗದೆ, ಸಾರ್ವಕಾಲಿಕ ಸತ್ಯದೊಂದಿಗೆ ಸರ್ವಧರ್ಮಗಳ ತತ್ವವನ್ನು ಜಗತ್ತಿಗೆ ಸಾರಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರಾದ ಡಾ| ಗಣನಾಥ ಶೆಟ್ಟಿ ಎಕ್ಕಾರು ಇವರು ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇವರ ಸಹಯೋಗದಲ್ಲಿ ನಡೆದ ಗುರುನಡೆ ಗ್ರಾಮದೆಡೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು. ನಾರಾಯಣಗುರುಗಳು ಕಂಡ ದೇವರು ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ರಾಜ್ಯಶಾಸ್ತ್ರ ಉಪನ್ಯಾಸಕ ಮತ್ತು ಸಂಘಟಕ ಶ್ರೀ ದಯಾನಂದ ಕರ್ಕೇರ ಉಗ್ಗೆಲ್‍ಬೆಟ್ಟು ಅವರು ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ತತ್ವವನ್ನು ನಾರಾಯಣಗುರುಗಳು ಬೋಧಿಸಿದ್ದು ಮಾತ್ರವಲ್ಲ ಅದನ್ನು ಸಾಮಾಜಿಕವಾಗಿ ಸಾಕಾರಗೊಳಿಸಿದರು. ಸಮಾನ ಸಮಾಜ ವ್ಯವಸ್ಥೆಯನ್ನು ರೂಪಿಸುವಲ್ಲಿ ಅವರು ಸ್ವಾತಂತ್ರ್ಯಪೂರ್ವದಲ್ಲಿ ಹಾಕಿದ ಅಡಿಪಾಯ ಮುಂದೆ ಹಲವಾರು ಸಾಮಾಜಿಕ ಸುಧಾರಣೆಗಳಿಗೆ ಕಾರಣವಾಯಿತು ಎಂದರು.
ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಅವರು ಪೀಠ ಹಾಗೂ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಸ್ವಾಗತಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ವಿಶ್ವನಾಥ ಕರಬ ಹಾಗೂ ಗೋವಿಂದದಾಸ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಜಯಂತಿ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಬಳಿಕ ನಾರಾಯಣಗುರುಗಳ ಸಂದೇಶದ ಕುರಿತಾಗಿ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಹೆಚ್ ಕೆ. ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರೆ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀ ಉಮೇಶ್ ಪೈ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments