HomeFresh Newsಕುಂಭಾಶಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

ಕುಂಭಾಶಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

ಕುಂದಾಪುರ: ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಕ್ಕೆ ಒಳಪಟ್ಟಿರುವ ಕುಂಭಶ್ರೀ ಶ್ರೀ ನಾಗಾಚಲ ಅಯ್ಯಪ್ಪಸ್ವಾಮಿ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ.

ಶ್ರೀ ಶಾರದಾ ಪೀಠ ಶೃಂಗೇರಿಯ ಪ್ರಾಂತೀಯ ಧರ್ಮಾಧಿಕಾರಿಗಳು, ವೇದಮೂರ್ತಿ ಲೋಕೇಶ್ ಅಡಿಗ ಅವರು ಮಾತನಾಡಿ, ಇಂದು ನಡೆಯುವ ದೇವಳದ ಎಲ್ಲಾ ಕಾರ್ಯಕ್ರಮಕ್ಕೂ ಚಾಲನೆ ನೀಡಿ ನವರಾತ್ರಿಯ ಅಂಗವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿದಿನ ನವರಾತ್ರಿ ಉತ್ಸವ ,ಚಂಡಿಕಾ ಹೋಮ, ಸಪ್ತಶತೀ ಪಾರಾಯಣ, ಕಲ್ಪೋಕ್ತ ಪೂಜೆ, ಅಷ್ಟಾವಧಾನ ಸೇವೆ ನಡೆಯುತ್ತಿದೆ. ಸತತ ಒಂಬತ್ತು ದಿನ ನಡೆಯುವ ಚಂಡಿಕ ಯಾಗಕ್ಕೆ ಭಕ್ತಾದಿಗಳು ಸಪರಿವಾರ ಸಮೇತರಾಗಿ ಆಗಮಿಸಿ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಈ ಮೂಲಕ ಹೇಳಿದರು. ದೇವಳದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು. ವೇದಮೂರ್ತಿ ಲೋಕೇಶ್ ಅಡಿಗ, ಶ್ರೀ ಶಾರದಾ ಪೀಠ ಶೃಂಗೇರಿಯ ಪ್ರಾಂತೀಯ ಧರ್ಮಾಧಿಕಾರಿಗಳು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments