HomeFresh Newsಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಪತ್ನಿಯನ್ನು ಆರೋಪಿ ಪತಿ ರೀಪಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎಕ್ಕಾರು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಆರೋಪಿ ಪತಿಯ ಬಂಧನವಾಗಿದೆ.

ತೆಂಕ ಎಕ್ಕಾರು ಗ್ರಾಮದ ಪಲ್ಲದಕೋಡಿ ನಿವಾಸಿ ಸರಿತಾ(35) ಕೊಲೆಯಾದ ಮಹಿಳೆ. ಆರೋಪಿ ಪತಿ ದುರ್ಗೇಶ ಎಂಬಾತ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿ ಸರಿತಾ ಜತೆ ಜಗಳವಾಡಿದ್ದನೆನ್ನಲಾಗಿದೆ. ಈ ವೇಳೆ ಮರದ ರೀಪಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಇದರಿಂದ ಗಂಭೀರ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 ಘಟನೆಯ ಸಮಯದಲ್ಲಿ ಮನೆಯಲ್ಲಿದ್ದ ಈ ದಂಪತಿಯ ಪುತ್ರ ರಾಹುಲ್ ಭಯದಿಂದ ಅಜ್ಜಿ ಮನೆಗೆ ಓಡಿಹೋಗಿದ್ದಾನೆ. ಇಂದು ಬೆಳಗ್ಗೆ ಆರೋಪಿ ದುರ್ಗೇಶ್ ತನ್ನ ಅಣ್ಣ ಮಧು ಎಂಬವರಿಗೆ ಕರೆ ಮಾಡಿ ಪತ್ನಿ ಸತ್ತಿರುವ ವಿಚಾರ ತಿಳಿಸಿದ್ದಾನೆ.

ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ದುರ್ಗೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments