HomeFresh Newsಲಾರಿಯೊಂದು ಢಿಕ್ಕಿ ಹೊಡೆದು ಆನೆ ಸಾವು

ಲಾರಿಯೊಂದು ಢಿಕ್ಕಿ ಹೊಡೆದು ಆನೆ ಸಾವು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂಬುವರನ್ನು ಬಂಧಿಸಲಾಗಿದೆ..

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಕೇರಳ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಆನೆಗೆ ಡಿಕ್ಕಿ ಹೊಡೆದಿದೆ. ಮದ್ದೂರು ವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ರಾತ್ರಿ 9 ಗಂಟೆಯ ನಂತರ ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧವಿದ್ದು, ಅದಕ್ಕೂ ಮೊದಲೇ ಈ ಘಟನೆ ನಡೆದಿದೆ. ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವಾದ ಬಳಿಕ ವಾಹನ ಅಪಘಾತದಲ್ಲಿ ದೊಡ್ಡ ಪ್ರಾಣಿಯೊಂದು ಇದೇ ಮೊದಲಾಗಿದೆ ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ..

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments