HomeFresh Newsಕುತ್ತಾರು : ಡಿವೈಡರ್ ಗುದ್ದಿದ ಬೈಕ್,ಸವಾರ ಗಂಭೀರ ಗಾಯ

ಕುತ್ತಾರು : ಡಿವೈಡರ್ ಗುದ್ದಿದ ಬೈಕ್,ಸವಾರ ಗಂಭೀರ ಗಾಯ

ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಾಳು. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ ಬೈಕ್ ಡಿವೈಡರಿಗೆ ಬಡಿದಿದ್ದು, ಪರಿಣಾಮ ಭೂಷಣ್ ಇನ್ನೊಂದು ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಗೆ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಕೆಲಕಾಲ ಬಿದ್ದಿದ್ದ ಅವರನ್ನು ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕೇರಳದ ಆಲ್ಟೋ ಕಾರಿನಲ್ಲಿದ್ದ ಐವರ ತಂಡ ತಕ್ಷಣ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಲೆಗೆ ಗಾಯವಾಗಿರುವ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments