ಭಾರತೀಯ ಜನತಾ ಪಾರ್ಟಿ ಇದೇ ಬರುವ 21ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಹೇಳಿದರು. ಅವರು ಮಾಧ್ಯಮದ ಜೊತೆ ಮಾತನಾಡಿ ಸರಣಿ ಕಾರ್ಯಕ್ರಮಗಳ ಮೂಲಕ ಜನ ಸಾಮಾನ್ಯರನ್ನು ತಳುಪಲಿದ್ದೇವೆ ಈ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ದರವರು ವಿಜಯಪುರದ ಸಿಂದಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಬೆಳ್ತಂಗಡಿ ಮಂಡಲದಲ್ಲಿ 8 ಮಹಾಶಕ್ತಿ ಕೇಂದ್ರ ಮಟ್ಟದಲ್ಲಿ 8 ಬೂತ್ ಗಳಲ್ಲಿ 21ರಂದು ಶಾಸಕರು ವಿಧಾನ ಪರಿಷತ್ ಸದಸ್ಯರು ಸೇರಿ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪುಟಾಣಿ,ಗಣೇಶ್ ಉಪಸ್ಥಿತರಿದ್ದರು.

