HomeFresh Newsಕಡಬ : ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಎಂಬ ಗುಮಾನಿ, ಅಗ್ನಿಶಾಮಕ ದಳಕ್ಕೆ ಮಾಹಿತಿ

ಕಡಬ : ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಎಂಬ ಗುಮಾನಿ, ಅಗ್ನಿಶಾಮಕ ದಳಕ್ಕೆ ಮಾಹಿತಿ

ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತಗೊಂಡ ಅನಿಲ ಕಂಪೆನಿಯು ಎಮರ್ಜೆನ್ಸಿ ರೆಸ್ಪಾನ್ಸ್ ತಂಡವನ್ನು ಸ್ಥಳಕ್ಕೆ ಕಳುಹಿಸಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments