HomeFresh Newsಮಂಗಳೂರು ವಿವಿ: ಮೌಲ್ಯಮಾಪನ ಕುಲಸಚಿವರಾಗಿ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಅಧಿಕಾರ ಸ್ವೀಕಾರ

ಮಂಗಳೂರು ವಿವಿ: ಮೌಲ್ಯಮಾಪನ ಕುಲಸಚಿವರಾಗಿ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಅಧಿಕಾರ ಸ್ವೀಕಾರ

ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರದ ಅಧಿಸೂಚನೆಯಂತೆ ಕುಲಸಚಿವ (ಮೌಲ್ಯಮಾಪನ) ರಾಗಿದ್ದ ಪ್ರೊ. ಪಿ ಎಲ್ ಧರ್ಮ ಅವರು ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು.

ಪ್ರೊ. ಪಿ ಎಲ್ ಧರ್ಮ ಅವರು ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಮುಂದುವರಿಯಲಿದ್ದಾರೆ. ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಅಧ್ಯಕ್ಷರ ಹೊಣೆಗಾರಿಕೆಯನ್ನು ಸಹಾಯಕ ಪ್ರಾಧ್ಯಾಪಕ ಡಾ. ಎ ರಮೇಶ್ ನಿಭಾಯಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments