ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಾಗುತ್ತಿರುವ 5ನೇ ದಿನದ ಅತಿರುದ್ರ ಮಹಾಯಾಗ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಐದನೇ ದಿನ ಫೆಬ್ರವರಿ 26, 2023 ರ ಭಾನುವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ದೇವಸ್ಥಾನದ ಪ್ರಾಂಗಣದಲ್ಲಿ ಆಚಾರ್ಯಾದಿ ಋತ್ವಿಗ್ವರಣ, 10 ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀಸೂಕ್ತ ಹೋಮ ನಡೆಯುತ್ತಿದೆ.

ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪುಂಗನೂರು ತಳಿಯ ಕರುಗಳು ಮತ್ತೊಂದು ಬಸವ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಪ್ರಮುಖ ಆಕರ್ಷಣೆಯಾಗಿದೆ. ಸಹಸ್ರಾರು ಭಕ್ತರು ಉಮಾಮಹೇಶ್ವರ ಕ್ಷೇತ್ರಕ್ಕೆ ಆಗಮಿಸಿ ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗುತ್ತಿದ್ದಾರೆ. ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ಜರುಗಲಿದೆ.


ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ಅತಿರುದ್ರ ಮಹಾಯಾಗ ಮಾರ್ಚ್ 05, 2023 ರವರೆಗೆ ನಡೆಯಲಿದೆ.


















