ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ : ನಿಸ್ವಾರ್ಥ ಹಾಗೂ ಪ್ರಾಮಾಣಿಕತೆಯ ಸೇವೆಗೆ ಅಭಿನಂದನೆ
ಮುಲ್ಕಿ: ಸರಕಾರಿ ಅಧಿಕಾರಿಯಾಗಿ ಮುಲ್ಕಿ ನಗರ ಪಂಚಾಯತ್ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನರ ಕುಂದು ಕೊರತೆ ಹಾಗೂ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸಿ ಉತ್ತಮ ಕಾರ್ಯಗಳನ್ನು ನಡೆಸಿ ನಿಸ್ವಾರ್ಥ ಸೇವೆ ಹಾಗೂ ಪ್ರಾಮಾಣಿಕತೆ ಮೆರೆದ ಮುಖ್ಯಾಧಿಕಾರಿ ಚಂದ್ರ ಪೂಜಾರಿಯವರ ಜನಸೇವೆ ಅಭಿನಂದನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.ಅವರು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗುವ ಸಂದರ್ಭದಲ್ಲಿ ತಮ್ಮ ಆಶ್ರಮದ ವತಿಯಿಂದ ಅವರನ್ನು ಗೌರವಿಸಿ ಮಾತನಾಡಿದರು.

ಈ ಸಂದರ್ಭ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ ,ಮೀರಾ ಚಂದ್ರ ಪೂಜಾರಿ, ಬಾಬಿ ಪೂಜಾರಿ, ಕಾರ್ತಿಕ್, ಕೃತಿಕಾ ಮತ್ತಿತರರು ಉಪಸ್ಥಿತರಿದ್ದರು.


















