HomeFresh Newsಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಮತ್ತು ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿ ಮಾಡಿದರು. ಇದೇ ವೇಳೆ ಮಾದ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬ ಶ್ರೀ ಮಂಜುನಾಥ ದೇವರ ಆರಾಧಕರು ಎಂದ ಅವರು, ಪಂಚರತ್ನ ಯೋಜನೆ ಬಗ್ಗೆ ರಾಜ್ಯದ ಜನತೆಯಲ್ಲಿ ಅರಿವು ಮೂಡಿದೆ. ಪ್ರಾದೇಶಿಕ ಪಕ್ಷವನ್ನು ಕನ್ನಡಿಗರು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಈ ಸಂದರ್ಭ ದ.ಕ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷ ಧರ್ಮರಾಜ್, ಯುವ ಜಿಲ್ಲಾ ಉಸ್ತುವಾರಿ ರತೀಶ್ ಕರ್ಕೇರಾ, ಹಿತೇಶ್ ರೈ , ಬೆಳ್ತಂಗಡಿ ತಾಲೂಕು ಜೆಡಿಎಸ್ ಅಧ್ಯಕ್ಷ ಶ್ರೀನಿವಾಸ್ ಗೌಡ ಜೊತೆಯಲ್ಲಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments