HomeFresh Newsಮಾಣಿಲ : ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು

ಮಾಣಿಲ : ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು

ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.

ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.
ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ.

manila accident

ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದು, ವಿಟ್ಲ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments