HomeFresh Newsಉಡುಪಿ : ಕಾಲುಸಂಕದಿಂದ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ : ಕಾಲುಸಂಕದಿಂದ ಬಿದ್ದು ವ್ಯಕ್ತಿ ಮೃತ್ಯು

ವ್ಯಕ್ತಿಯೋರ್ವರು ಕಾಲುಸಂಕದಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ಬಿಜೂರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಹೋಟೆಲ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಮಠದಬೆಟ್ಟು ತೋಡಿನಲ್ಲಿ ಸತೀಶ್ ಮೃತದೇಹ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಮೇಲೆಕ್ಕೆತ್ತಿದ್ದಾರೆ. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು. ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ, ಎಎಸ್ಪಿ ಸಿದ್ದಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments