HomeFresh Newsಕಡಬ : ಶಾಸಕಿ ಭಾಗೀರಥಿ ಮುರುಳ್ಯ ಅವರ ನೂತನ ಕಚೇರಿ ಉದ್ಘಾಟನೆ

ಕಡಬ : ಶಾಸಕಿ ಭಾಗೀರಥಿ ಮುರುಳ್ಯ ಅವರ ನೂತನ ಕಚೇರಿ ಉದ್ಘಾಟನೆ

ಸುಳ್ಯ ತಾಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಡಬ ಮಿನಿ ವಿಧಾನ ಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಲಾಯಿತು. ಬೆಳಿಗ್ಗೆ ಗಣಹೋಮ ಪೂಜೆ ನಡೆಸಿದ ಬಳಿಕ ಉದ್ಘಾಟನೆ ನೆರವೇರಿಸಲಾಯಿತು. ಜನಸಂಘ ಹಗೂ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆಗುತ್ತು ಪೆರಾಬೆ ಹಾಗೂ ತನಿಯಪ್ಪ ಮಜ್ಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ದೀಪ ಬೆಳಗಿಸಿ ಉದ್ಘಾಟನೆ ನೆರವೇರಸಿದರು.

ಶಾಸಕಿ ಭಾಗೀರಥಿ ಮುರುಳ್ಯ ಅವರು 94 ಸಿ ಹಾಗೂ ಅಕ್ರಮ ಸಕ್ರಮದಡಿಯಲ್ಲಿ ಭೂಮಿ ಮಂಜೂರಾದ 150 ಫಲಾನುಭವಿಗಳಿಗೆ ಪತ್ರ ವಿತರಣೆ ನೆರವೇರಸಿ ಮಾತನಾಡಿ ಕಡಬದಲ್ಲಿ ಶಾಸಕರ ಕಛೇರಿ ತೆರೆಯಬೇಕು ಎನ್ನುವ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ, ಕಚೇರಿ ಮುಖಾಂತರ ಸಮಾಜದ ಕಟ್ಟಡ ಕಡೆಯ ಜನತೆಗೆ ಸರಕಾರ ಸವಲತ್ತುಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಕಡಬ ತಹಸೀಲ್ದಾರ್ ರಮೇಶ್ ಬಾಬು ಮಾತನಾಡಿ ಶಾಸಕರು ಕಡಬದಲ್ಲಿ ಲಭ್ಯವಿರುವುದರಿಂದ ಇಲ್ಲಿನ ಕೆಲಸಕಾರ್ಯಗಳಿಗೆ ವೇಗ ದೊರೆಯಲಿದೆ ಎಂದರು. ಮೀನುಗಾರಿಕೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎ.ವಿ.ತೀರ್ಥಾರಾಮ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಪತಹಸೀಲ್ದಾರ್‍ರಾದ ಗೋಪಾಲ್ ಕಲ್ಲುಗುಡ್ಡೆ, ಮನೋಹರ ಕೆ.ಟಿ , ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ವೆಂಕಟ್ ವಳಲಂಬೆ, ಪುಲಾಸ್ತ್ಯ ರೈ, ರಾಕೇಶ್ ರೈ ಕೆಡೆಂಜಿ, ಭಾಸ್ಕರ ಗೌಡ ಇಚ್ಲಂಪಾಡಿ, ಸುಭೋದ್ ರೈ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments