HomeFresh Newsಉಳ್ಳಾಲ : ಸಿಟಿ ಬಸ್ ಚಾಲಕನ ಬೇಜವಾಬ್ದಾರಿ ವರ್ತನೆ ವಿರುದ್ಧ ಆಕ್ರೋಶ

ಉಳ್ಳಾಲ : ಸಿಟಿ ಬಸ್ ಚಾಲಕನ ಬೇಜವಾಬ್ದಾರಿ ವರ್ತನೆ ವಿರುದ್ಧ ಆಕ್ರೋಶ

ಉಳ್ಳಾಲ : ಸ್ಟೇಟ್ ಬ್ಯಾಂಕ್ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.

ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟುವರೆಗೂ, ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಬೇಜವಾಬ್ದಾರಿಯುತವಾಗಿ ಬಸ್ಸನ್ನು ಚಲಾಯಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಬಸ್ಸಲ್ಲಿ ಅಧಿಕ ಪ್ರಯಾಣಿಕರೂ ಇದ್ದರು ಎಂಬುದನ್ನು ಪ್ರಯಾಣಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಗಿಂತ ಹೆಚ್ಚಾಗಿ ಮೊಬೈಲನ್ನೇ ಚಾಲಕ ವೀಕ್ಷಿಸುತ್ತಿರುವುದು ಅನಾಹುತ ಆಹ್ವಾನಿಸುತ್ತಿದೆ. ಸಾರಿಗೆ ಅಧಿಕಾರಿಗಳು ಬಸ್ ಪರ್ಮಿಟ್ ರದ್ದುಗೊಳಿಸಬೇಕು ಹಾಗೂ ಸಂಚಾರಿ ಪೆÇಲೀಸರು ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. 117 (ಐಎಂವಿ) ಮೋಟಾರ್ ಆಕ್ಟ್ ನಡಿ ಸಿಟಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಪ್ರಸ್ತುತ ಕಾಯಿದೆಯಡಿ ಲೈಸನ್ಸ್ ರದ್ದುಗೊಳಿಸುವುದು ಹಾಗೂ ದಂಡ ವಿಧಿಸಲಾಗುವುದು. ಸಾರ್ವಜನಿಕವಾಗಿ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಇಲಾಖೆ ಪ್ರಕರಣ ದಾಖಲಿಸಲಾಗುವುದು’ ಎಂದು ಮಂಗಳೂರು ದಕ್ಷಿಣ ಸಂಚಾರಿ ಪೆÇಲೀಸ್ ಠಾಣಾ ಇನ್ಸ್ ಪೆಕ್ಟರ್ ರಮೇಶ್ ಹಾನಾಪುರ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments