HomeFresh Newsಎರ್ಮಾಳು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಎರ್ಮಾಳು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಮಕ್ಕಳಲ್ಲಿ ಅಡಕವಾಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹುವ ಉದ್ಧೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಳೆ ವಿದ್ಯಾರ್ಥಿಗಳು ಸಹಿತ ದಾನಿಗಳ ಸಹಕಾರದಿಂದ ಎರ್ಮಾಳು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂಬುದಾಗಿ ಮುಖ್ಯ ಶಿಕ್ಷಕಿ ವಿನೋದ ಹೇಳಿದ್ದಾರೆ.

ಅವರು ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕ್ಲಸ್ಟರ್ ನ ಹತ್ತೊಂಭತ್ತು ಶಾಲೆಗಳಿಂದ ಸುಮಾರು ಆರುನೂರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಒಟ್ಟು ಅರವತ್ತು ಬಗೆಯ ಸ್ಪರ್ಧೆಗಳು ನಡೆಯಲಿದೆ ಎಂದರು.

ಈ ಸಂದರ್ಭ ಸಹ ಶಿಕ್ಷಕಿ ಮಲ್ಲಿಕಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಮಕ್ಕಳ ಪೆÇೀಷಕರ ಸಂಘದ ಅಧ್ಯಕ್ಷ ಸೋಮಯ್ಯ ಎರ್ಮಾಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments