HomeFresh Newsಬೆಳ್ತಂಗಡಿ: ಪಟ್ರಮೆ ಮೀಸಲು ಅರಣ್ಯದಲ್ಲಿ ಕಡವೆ ಬೇಟೆ- ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಪಟ್ರಮೆ ಮೀಸಲು ಅರಣ್ಯದಲ್ಲಿ ಕಡವೆ ಬೇಟೆ- ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿದ ಮೂವರನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ.

ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಸಂಕೇಶ ನಿವಾಸಿ ಕೊಟ್ಯಪ್ಪ ಗೌಡ, ಪುನೀತ್ ಮಣಿಯೇರು, ಎಸ್.ಜೆ.ಸುದೇಶ ಸಂಕೇಶ ಬಂಧಿತ ಆರೋಪಿಗಳು. ಲೋಕೇಶ್ ಸಂಕೇಶ ಎಂಬಾತ ಕಾಡಿನಲ್ಲಿ ಪರಾರಿಯಾಗಿದ್ದು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಗಳಿಂದ ಕಡವೆಯ ಮೃತ ದೇಹ ಮತ್ತು ಸಿಂಗಲ್ ಬ್ಯಾರೆಲ್ ಬ್ರೀಚ್ ಲೋಡರ್ ಕೋವಿಯನ್ನು ವಶಕ್ಕೆ ಪಡೆಯಲಾಗಿದೆ.

ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ರವರ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಲೋಕೇಶ್, ಅಶೋಕ್, ರಾವುತಪ್ಪ ಬಿರಾದಾರ್, ಅರಣ್ಯಾಧಿಕಾರಿ ವಿನಯಚಂದ್ರ, ಪ್ರಶಾಂತ್, ವಾಹನ ಚಾಲಕ ಕಿಶೋರ್ ಕಾರ್ಯಾಚರಣೆ ನಡೆಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments