HomeFresh Newsರಾಜ್ಯದಲ್ಲಿರುವುದು ಭ್ರಷ್ಟಾಚಾರದ ಹಾಗೂ ಪರ್ಸಂಟೇಜ್ ಸರ್ಕಾರ : ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿರುವುದು ಭ್ರಷ್ಟಾಚಾರದ ಹಾಗೂ ಪರ್ಸಂಟೇಜ್ ಸರ್ಕಾರ : ನಳಿನ್ ಕುಮಾರ್ ಕಟೀಲ್

ಮಂಗಳೂರು : `ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ 42 ಕೋಟಿ ರೂ. ಕಮಿಷನ್ ಹಣ ಎಂಬ ಮಾಹಿತಿ ಇದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ಅವರು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ.ಬಾಕಿ ಹಣ ಸರ್ಕಾರ ಬಿಡುಗಡೆ ಮಾಡಿತ್ತು.

ಈಗ ಸಿಕ್ಕ ಹಣ ಕಮಿಷನ್ ಹಣ ಎಂಬ ಮಾಹಿತಿ ಸಿಕ್ಕಿದೆ. ತೆಲಂಗಾಣದ ಚುನಾವಣೆಗೆ ಸಂಗ್ರಹಿಸಲಾದ ಹಣ ಎನ್ನಲಾಗುತ್ತಿದೆ. ಕೆಲ ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು. ನಾವು ಚುನಾವಣೆ ಹೊತ್ತಲ್ಲೇ ಇದು ಎಟಿಎಂ ಸರಕಾರ ಅಂದಿದ್ದೆವು’ ಎಂದರು.

ಇದೊಂದು ಭ್ರಷ್ಟಾಚಾರದ ಹಾಗೂ ಪರ್ಸಂಟೇಜ್ ಸರ್ಕಾರ. ಭ್ರಷ್ಟಾಚಾರಿಗಳ ಬೆಂಗಾವಲಿಗಿರುವ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ. ಸುಳ್ಳು ಹೇಳಿ, ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಕರ್ನಾಟಕ ಕತ್ತಲೆಯಲ್ಲಿದೆ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿದೆ. ರೈತರಿಗೆ ವಿದ್ಯುತ್ ಇಲ್ಲ, ನಿದ್ದೆಗೆಟ್ಟರೂ ರೈತರಿಗೆ ಕರೆಂಟ್ ಇಲ್ಲ’ ಎಂದು ಕಿಡಿ ಕಾರಿದರು.

`ಇಸ್ರೇಲ್ ಯುದ್ದದ ವಿಚಾರದಲ್ಲಿ ಭಯೋತ್ಪಾದಕರಿಗೆ ಬೆಂಬಲ ಕೊಡುತ್ತಿದೆ. ಪ್ಯಾಲೇಸ್ತೀನ್ ಪರ ಕಾಂಗ್ರೆಸ್ ಮತ್ತು ಅದರ ಒಕ್ಕೂಟ ನಿಂತಿದೆ’ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments