HomeFresh Newsಉಡುಪಿ: ಹತ್ಯೆ ಪ್ರಕರಣ: ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಹತ್ಯೆ ಪ್ರಕರಣ: ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಮನೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಈ ಕೃತ್ಯ ಬೆಚ್ಚಿ ಬೀಳುವ ಘಟನೆ ಆಗಿದೆ. ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಷವಾಗಿ ಕೊಂದು ರಾಕ್ಷಸ ಕೃತ್ಯ ಎಸಗಿದ್ದಾನೆ. ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ ಎಂದರು ಹೇಳಿದರು.

ಪೆÇಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಪಡುತ್ತೇವೆ. ಉಡುಪಿ ಶಾಂತಿ ಪ್ರಿಯ ಜಿಲ್ಲೆ, ಇಂತಹ ಘಟನೆ ಜಿಲ್ಲೆಯಲ್ಲಿ ನಡೆಯಬಾರದಿತ್ತು. ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತೇನೆ, ಕಾನೂನು ಸುವ್ಯವಸ್ಥಿತೆ ಕಾಪಾಡುತ್ತೇವೆ ಎಂದರು.

ಫಾಸ್ಟ್ ಟ್ರಾಕ್ ನ್ಯಾಯಾಲಯದ ಮೂಲಕ ತನಿಖೆಗೆ ಒತ್ತಾಯಿಸಿದ್ದಾರೆ. ಮನೆಯವರು ಒಬ್ಬರ ಹೆಸರು ಕೊಟ್ಟಿದ್ದಾರೆ ಅವರ ಮೂಲಕ ತನಿಖೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments