HomeFresh Newsಕಾಂತಾರ ಚಾಪ್ಟರ್-1 ಫಸ್ಟ್ ಲುಕ್, ಟೀಸರ್ ಬಿಡುಗಡೆ

ಕಾಂತಾರ ಚಾಪ್ಟರ್-1 ಫಸ್ಟ್ ಲುಕ್, ಟೀಸರ್ ಬಿಡುಗಡೆ

ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್ ಕಾಂತಾರ ಚಾಪ್ಟರ್ ಫಸ್ಟ್ ಲುಕ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ.

ಯುಟ್ಯೂಬ್‍ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಪ್ರೀಕ್ವೆಲ್ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂದು ಬಹಿರಂಗವಾಗಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್ ಅನ್ನು ಹೊಂಬಾಳೆ ಬಣ್ಣಿಸಿದೆ. ನಟ ರಿಷಬ್ ಶೆಟ್ಟಿ ಅವರ ಸಿನಿಪಯಣದ ದಿಕ್ಕನ್ನು ಬದಲಿಸಿದ ಸಿನಿಮಾ ಕಾಂತಾರ. ವಿಶ್ವವ್ಯಾಪಿ ಪ್ರೇಕ್ಷಕರ ಮನಗೆಲ್ಲುವುದರೊಂದಿಗೆ, ಬಾಕ್ಸ್ ಆಫೀಸ್‍ನಲ್ಲಿ ಕೋಟಿ ಕೋಟಿ ಹಣವನ್ನೂ ಬಾಚಿತ್ತು. ಇದೀಗ ಈ ಸಿನಿಮಾದ ಪ್ರೀಕ್ವೆಲ್ ತೆರೆಯ ಮೇಲೆ ಬರಲಿದ್ದು, ಪ್ರೇಕ್ಷಕರಲ್ಲಿ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments