ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್: ನಳಿನ್‌ಕುಮಾರ್ ಕಟೀಲ್
ರೈತರು, ಮಹಿಳೆಯರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಮಂಡನೆಯಾಗಿದೆ. ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭದ್ರ ತಳಪಾಯ ಹಾಕಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ., ಶಿಕ್ಷಣ,ಉದ್ಯೋಗ ಮತ್ತು ಕೌಶಲಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂ., ಮಹಿಳೆಯರ ಅಭಿವೃದ್ಧಿಗೆ 3 ಲಕ್ಷ ಕೋಟಿ ರೂ., ಕೃಷಿ ವಲಯಕ್ಕೆ 1.52 ಲಕ್ಷ ರೂ. ಮೀಸಲಿರಿಸುವ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುದ್ರಾ ಯೋಜನೆಯ ಸಾಲದ ಮೀತಿ ಏರಿಕೆ ಸ್ವಾಗತಾರ್ಹ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.