ಉಪ್ಪಿನಂಗಡಿಯ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ

ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ.


ಪೃಥ್ವಿ ವಾಣಿಜ್ಯ ಮಳಿಗೆಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.ಮೊದಲಿಗೆ ಫ್ಯಾನ್ಸಿ ಅಂಗಡಿಯಿಂದ ಹೊಗೆ ಕಾಣಿಸಿಕೊಂಡಿತ್ತು ಬಳಿಕ ಬೆಂಕಿ ವ್ಯಾಪಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದೀಗ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
