ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಡುಬಿದ್ರಿಯಲ್ಲಿ ಬೃಹತ್ ಗಾಂಧಿ ಭಾರತ ಸಮಾವೇಶ

ಪಡುಬಿದ್ರಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಭಾರತ ಬೃಹತ್ ಸಮಾವೇಶವನ್ನು ಪಡುಬಿದ್ರಿಯಲ್ಲಿ ಭವ್ಯವಾಗಿ ಹಮ್ಮಿಕೊಳ್ಳಲಾಯಿತು.

ಈ ಸಮಾವೇಶಕ್ಕೆ ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ನೇತೃತ್ವ ವಹಿಸಿದ್ದರು.

ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವಿಫ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮ್ಮದ್ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ತತ್ವ ಮತ್ತು ಮೌಲ್ಯಗಳನ್ನು ಜನರೊಳಗೆ ತಲುಪಿಸುವ ಅಗತ್ಯವನ್ನು ಒತ್ತಿ ಹೇಳಿದರು. ಅವರು, ಬಿಜೆಪಿ ಸರ್ಕಾರ ಜನರ ವಿಶ್ವಾಸಕ್ಕೆ ಧಕ್ಕೆ ತಂದಿದ್ದು, ಕಾಂಗ್ರೆಸ್ ಮಾತ್ರ ಜನಪರ ಆಡಳಿತ ನೀಡಬಲ್ಲ ಪಕ್ಷವಾಗಿದೆ ಎಂದು ಹೇಳಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುಧೀರ್ ಕುಮಾರ್ ಮೊರೋಳಿ ಅವರು, ಬಿಜೆಪಿ ಮತ ಕದಿಯುವ ರಾಜಕಾರಣ ನಡೆಸುತ್ತಿದೆ ಎಂಬ ಆರೋಪ ಮಾಡಿ, ಚುನಾವಣಾ ಆಯೋಗದ ನಿಲುವಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಅದೇ ರೀತಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರು, ಗಾಂಧಿಯವರ ತತ್ವಗಳ ಆಧಾರದ ಮೇಲೆ ದೇಶವನ್ನು ಬಲಪಡಿಸುವ ಹೊಣೆಗಾರಿಕೆ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಮುನೀರ್ ಜನ್ಸಾಲೆ ಮಾತನಾಡಿ, ಕಾರ್ಯಕರ್ತರು ನೆಲಮಟ್ಟದಲ್ಲಿ ಸಂಘಟನೆಯ ಬಲವರ್ಧನೆಗೆ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಬ್ದುಲ್ ಮುನೀರ್ ಜನ್ಸಾಲೆ, ಸುಕುಮಾರ್, ನವೀನ್ ಚಂದ್ರ ಸುವರ್ಣ, ಶರ್ಪುದ್ದೀನ್ ಶೇಖ್, ಮಹಮ್ಮದ್ ನಿಯಾಜ್, ದಿವಾಕರ್ ಶೆಟ್ಟಿ, ನವೀನ್ ಚಂದ್ರ ಜೆ. ಶೆಟ್ಟಿ, ಗೀತಾ ವಾಗ್ಲೆ, ಜೀತೇಂದ್ರ ಫುರ್ಟಾಡೋ, ನವೀನ್ ಚಂದ್ರ ಎನ್. ಶೆಟ್ಟಿ ಕರುಣಾಕರ್ ಪೂಜಾರಿ ಯಶ್ವಂತ್ ಫಲಿಮಾರ್, ಸುಧೀರ್ ಹೆಜಮಾಡಿ, ಕಿಶೋರ್ ಎರ್ಮಲ್,ಸೇರಿದಂತೆ ಅನೇಕ ಪ್ರಮುಖ ನಾಯಕರು ಪಾಲ್ಗೊಂಡಿದ್ದರು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಕುಮಾರ್ ಸ್ವಾಗತಿಸಿ, ಸಂತೋಷ್ ಕುಮಾರ್ ಧನ್ಯವಾದಗಳನ್ನು ಅರ್ಪಿಸಿದರು. ಸಮಾವೇಶವನ್ನು ರಾಜೇಶ್ ಶೇರಿಗಾರ್ ನಿರೂಪಿಸಿದರು.

Related Posts

Leave a Reply

Your email address will not be published.