ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ನೇಮಕ,ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಸಂತೋಷ್ ಕಾಮತ್
ಮಂಗಳೂರು: ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದ್ದು,
ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ. ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕಾಮತ್ ಅವರಿಗೆ ರಾಜ್ಯ ಸಂಘಟನೆಯಲ್ಲಿ ಜವಾಬ್ದಾರಿ ನೀಡಲಾಗಿದ್ದು, ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ರಾಜ್ಯದ ಚುನಾವಣೆಯ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಉಸ್ತುವಾರಿ ದೆಹಲಿ ಶಾಸಕ ದಿಲೀಪ್ ಪಾಂಡೆ ಅವರು ರಾಜ್ಯ ಮತ್ತು ಜಿಲ್ಲಾ ಸಮಿತಿಗಳನ್ನು ವಿಸರ್ಜಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹೊಸ ಸಮಿತಿಗಳನ್ನು ಪ್ರಕಟಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ಪ್ಲೋರಿನ್ ಗೊವಿಸ್ ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಕೊಲ್ಪೆ ಅವರನ್ನು ನೇಮಕ ಮಾಡಲಾಗಿದೆ.