ಮಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನೆ ನಡೆಸಿದರು.ಮಂಗಳೂರು ಕ್ಲಾಕ್ ಟವರ್ ಎದುರು ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಡ್ರಗ್ಸ್ ನಿಯಂತ್ರಣಕ್ಕೆ ಆಗ್ರಹಿಸಿದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನಾಯಕರು ಗಡಿ ಭಾಗದಿಂದ ಮಂಗಳೂರಿಗೆ ಸರಬರಾಜು ಆಗುತ್ತಿರುವ ಮಾದಕದ್ರವ್ಯಕ್ಕೆ ತಡೆ ಹಾಕಬೇಕು ಎಂದು ಆಗ್ರಹಿಸಿದರು.ಡ್ರಗ್ಸ್ ಜಾಲಕ್ಕೆ ಬಲಿಯಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಪ್ರತಿಭಟನಾ ನಿರತರು ತೀವ್ರ ಕಳವಳ ವ್ಯಕ್ತಪಡಿಸಿದರು.ಈ ವೇಳೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮುಖಂಡರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.