ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆ : ಎಬಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ

ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಹಲವು ಕಾಲೇಜ್‍ನ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಬಿವಿಪಿ ಮುಖಂಡ ಮಣಿಕಂಠ ಮಾತನಾಡಿ, ವಿಶ್ವ ವಿದ್ಯಾನಿಲಯ ಅಂಕಪಟ್ಟಿಯನ್ನು ನೀಡದೆ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ ಅದೇ ರೀತಿ ಯುಯುಸಿಎಂಎಸ್ ತಂತ್ರಾಂಶದ ಲೋಪ ದೋಷದಿಂದ ವಿದ್ಯಾರ್ಥಿಗಳು ಗೊಂದಲದಿಂದ ಇದ್ದಾರೆ ಎಂದು ಆರೋಪಿಸಿದರು.