HomeFresh Newsಶಾಸಕರಿಂದ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ - ವಿವಿಧ ಸವಲತ್ತು ವಿತರಣೆ

ಶಾಸಕರಿಂದ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತು ವಿತರಣೆ

ಪೆರ್ಡೂರು: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣೆ ಮತ್ತು ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ವಲಯ ಕಾರ್ಮಿಕರ ಸಮಸ್ಯೆ ಬಗ್ಗೆ ಅಹವಾಲು ಸ್ವೀಕಾರ ಮತ್ತು ಅರಿವುಇ ಕಾರ್ಯಕ್ರಮ ದಿನಾಂಕ 06-02-2026 ಶುಕ್ರವಾರದಂದು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

94 ಸಿ ಅಡಿಯಲ್ಲಿ 21 ಫಲಾನುಭವಿಗಳಿಗೆ ಖಾಯಂ ನಿವೇಶನ ಹಕ್ಕುಪತ್ರ ಹಾಗೂ ಪಂಚಾಯತ್ ನಿಧಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಉಡುಪಿ ತಹಶೀಲ್ದಾರರಾದ ಗುರುರಾಜ್, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಪೆರ್ಡೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುಮನ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments