ಜೆಸಿಬಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಜೆಸಿಬಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೂರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಶೆಟ್ಟಿ ಮನೆಯ ಆದರ ಸ್ತಂಭವಾಗಿದ್ದು, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

add - TMA pai

Related Posts

Leave a Reply

Your email address will not be published.