ಉಡುಪಿ: ವೈದ್ಯರ ಚಿಕಿತ್ಸಾಲಯಕ್ಕೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವೈದ್ಯಕೀಯ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಚಿಕಿತ್ಸಾಲಯಕ್ಕೆ ರಾತ್ರಿ ವೇಳೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಖಂಡನೀಯವಾಗಿದೆ. ವೈದ್ಯರ ಮೇಲೆ ನಡೆಯುವ ಇಂತಹ ಕೃತ್ಯಗಳು ವೈದ್ಯಕೀಯ ವೃತ್ತಿಯ ಸುರಕ್ಷತೆ ಹಾಗೂ ಸಮಾಜದ ಆರೋಗ್ಯ ಸೇವೆಯ ಮೇಲೆ ಪರಿಣಾಮ ಬೀರುತ್ತವೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯ ಜನರಿಗೆ ಸೇವೆ ಒದಗಿಸುವ ಖಾಸಗಿ ವೈದ್ಯರು ಹಾಗೂ ಚಿಕಿತ್ಸಾಲಯಗಳ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ವೈದ್ಯರ ಕ್ಲಿನಿಕ್‌ಗಳಿಗೆ ಬೆಂಕಿ ಹಚ್ಚುವಂತಹ ದುಷ್ಕೃತ್ಯಗಳಿಗೆ ಕಾರಣರಾದವರನ್ನು ಕಾನೂನಿನ ಅಡಿಯಲ್ಲಿ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎನ್.ಟಿ ಅಂಜನ್ ಮತ್ತು ಇತರ ಹಾಗೂ ಸಹ ವೈದ್ಯರು ಹಾಗೂ ಡಾ| ಪ್ರದೀಪ್ ಎ ನಾವೂರು ಅವರ ಜೊತೆ ಆಯುಷ್ ವೈದ್ಯರು ಸದಾ ಬೆಂಬಲವಾಗಿ ಸ್ಥೆರ್ಯದಿಂದಿರಲು ಸಂಪೂರ್ಣ ಸಹಕಾರ ನೀಡಲಿದ್ದಾರೆ.
ಸರಕಾರವು ವೈದ್ಯರ ಸೇವೆಗೆ ಸೂಕ್ತ ರಕ್ಷಣೆ ಒದಗಿಸುವುದರ ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ವೈದ್ಯರು ಆಗ್ರಹಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈದ್ಯರ ಚಿಕಿತ್ಸಾಲಯಕ್ಕೆ ಬೆಂಕಿ ಹಚ್ಚಿರುವ ಕೃತ್ಯ ಖಂಡನೀಯ: ತಪ್ಪಿತಸ್ಥರ ಬಂಧನಕ್ಕೆ ಆಗ್ರಹ
RELATED ARTICLES

