ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಡಾ| ಶಿವರಾಜ್ ಕುಮಾರ್ ಭೇಟಿ

ಉಳ್ಳಾಲ: ಕುತ್ತಾರು ಅಜ್ಜನ ಕಟ್ಟೆಗೆ ಬಂದಾಗ ನೆಮ್ಮದಿಯಿದೆ, ನಂಬಿಕೆಯೂ ಇರುವುದರಿಂದ ಮಂಗಳೂರು ವ್ಯಾಪ್ತಿಗೆ ಬರುವಾಗ ಈ ಭಾಗಕ್ಕೆ ಭೇಟಿ ನೀಡುತ್ತಲಿರುವೆೆಂದು ಹ್ಯಾಟ್ರಿಕ್ ಹೀರೋ ಡಾ| ಶಿವರಾಜ್ ಕುಮಾರ್ ಹೇಳಿದ್ದಾರೆ.
ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿ ಅಜ್ಜನ ಕಟ್ಟೆಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದರು.

ಶೃಂಗೇರಿ ಮಠ, ಶ್ರೀ ಕೃಷ್ಣ ಮಠ, ಕುದ್ರೋಳಿ ಗೋಕರ್ಣನಾಥೇಶ್ವರ, ವನದೇವತೆ, ಕೊರಗಜ್ಜನ ಕ್ಷೇತ್ರಕ್ಕೆ ಸಂದರ್ಶನಗೈಯ್ಯುತ್ತಾ ಬಂದಿದ್ದೇನೆ. ಎಲ್ಲಾ ಸಾನಿಧ್ಯಕ್ಕೆ ಭೇಟಿಕೊಟ್ಟಾಗ ನೆಮ್ಮದಿಯಿರುತ್ತದೆ. ನಂಬಿಕೆಯೂ ಬಲವಾಗಿರುವುದರಿಂದ ಜೀವನ ಚೆನ್ನಾಗಿರಲಿ ಅನ್ನುವ ಭರವಸೆಯ ಜೊತೆಗೆ ಸಂದರ್ಶನಗೈದಿರುವೆ. ನ.೧೫ರ ಆಸುಪಾಸಿನಲ್ಲಿ ಅರ್ಜುನ್ ಜನ್ಯ ನಿರ್ದೇಶಿಸಿದ ರಿಯಲ್ ಸ್ಟಾರ್ ಉಪೇಂದ್ರ , ರಾಜ್ ಬಿ ಶೆಟ್ಟಿ ಸಹಿತ ತಾನು ನಟಿಸಿದ ಫಾರ್ಟಿಫೈವ್ ಚಿತ್ರ ತೆರೆಕಾಣಲಿದೆ. ಇನ್ನೊಂದು ಚಿತ್ರದ ಎನ್ಕೆöÊರಿ ಇದ್ದು, ಶೀಘ್ರವೇ ಪ್ರಾಜೆಕ್ಟ್ ಆರಂಭವಾಗಲಿದೆ ಎಂದರು.
ಈ ಸಂದರ್ಭ ಗೀತಾ ಶಿವರಾಜ್ ಕುಮಾರ್ , ಸಿನೆಮಾ ನಿರ್ಮಾಪಕ ಶ್ರೀಕಾಂತ್, ರಾಜೇಶ್ ಭಟ್, ಶ್ರೀ ಪಂಜAದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ಉಪಾಧ್ಯಕ್ಷ ಮಹಾಬಲ ಹೆಗ್ಡೆ ದೆಬ್ಬೇಲಿ, ಟ್ರಸ್ಟಿಗಳಾದ ಪ್ರೀತಮ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಜಗನ್ನಾಥ್ ರೈ, ವಿದ್ಯಾಚರಣ್ ಭಂಡಾರಿ,ಷ ಶ್ರೀರಾಮ್ ರೈ, ಬಾಲಕೃಷ್ಣ ರೈ ಉಪಸ್ಥಿತರಿದ್ದರು.
