ಉಡುಪಿ: ಅ.1ರಂದು ವಿಶ್ವ ಹೃದಯ ದಿನದ ಪ್ರಯುಕ್ತ ಬೃಹತ್ ಜಾಥಾ

ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಅಕ್ಟೋಬರ್ 1, 2022 ರ ಶನಿವಾರದಂದು ಬೆಳಿಗ್ಗೆ 09:00 ರಿಂದ ಮಧ್ಯಾಹ್ನ 12:00 ರವರೆಗೆ ಬೃಹತ್ ಜಾಥಾವನ್ನು ಆಯೋಜಿಸಲಾಗಿದೆ.

ಇದರ ಉದ್ಘಾಟನಾ ಸಮಾರಂಭವು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ನಡೆಯಲಿದ್ದು, ಈ ಜಾಥಾವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಇಂಧನ ಸಚಿವರಾದ ವಿ ಸುನಿಲ್ ಕುಮಾರ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಿದ್ದಾರೆ.

ಈ ಉದ್ಘಾಟನಾ ಸಮಾರಂಭದ ಬಳಿಕ ಜಾಥಾವು ಅಜ್ಜರಕಾಡು ಜೋಡುಕಟ್ಟೆ, ಬಿಗ್ ಬಜಾರ್, ಡಯಾನ ಸರ್ಕಲ್, ಕೆ. ಎಂ ಮಾರ್ಗದಲ್ಲಿ ಸಾಗಿ ಬಂದು ಕ್ಲೋಕ್ ಟವರ್ ತಿರುವು ಪಡೆದು ಆದರ್ಶ ಆಸ್ಪತ್ರೆಯಲ್ಲಿ ಸಮಾಪನಗೊಳ್ಳುವುದು. ಜಾಥಾದಲ್ಲಿ ವಿವಿಧ ನರ್ಸಿಂಗ್ ಕಾಲೇಜುಗಳ ಸರಿಸುಮಾರು 1800 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಹೃದ್ರೋಗದ ಬಗ್ಗೆ ಮಾಹಿತಿ ನೀಡುವ ಹಾಗೂ ಜಾಗೃತಿ ಮೂಡಿಸುವ ವಿವಿಧ ಫಲಕಗಳ ಪ್ರದರ್ಶನ, ವ್ಯಾಯಾಮ, ಹೃದಯ ಸ್ತಂಭನವಾದಾಗ ಅನುಸರಿಸಬೇಕಾದ ಕ್ರಮಗಳ ಪ್ರಾತ್ಯಕ್ಷಿತೆ ಇತ್ಯಾದಿಗಳನ್ನು ಆಯೋಜಿಸಲಾಗಿದೆ. ಈ ಜಾಥಾದಲ್ಲಿ ವೈದ್ಯರು, ಗಣ್ಯ ವ್ಯಕ್ತಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಅನಂತರ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ, ರಕ್ತದ ಸಕ್ಕರೆ ಅಂಶ, ಕೊಬ್ಬಿನಾಂಶ ಹಾಗೂ ಇ ಸಿ ಜಿ ಪರೀಕ್ಷೆಗಳನ್ನು ಉಚಿತವಾಗಿ ಹಾಗೂ ಹೃದಯದ ಆಂಜಿಯೋಗ್ರಾಮ್ ಹಾಗೂ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಲಾಗುವುದು.

ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಜಿ.ಎಸ್. ಚಂದ್ರಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಶ್ರೀ ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಮಧುಸೂದನ್ ನಾಯಕ್ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಯಾದ ಶ್ರೀಮತಿ ನಾಗರತ್ನರವರು ತಿಳಿಸಿದ್ದಾರೆ.

Related Posts

Leave a Reply

Your email address will not be published.