ಆದರ್ಶ ಗ್ರಾಮಾಭಿವೃದ್ಧಿ ಸೇವಾ ಸಂಸ್ಥೆಯಿಂದ ವೃತ್ತಿ ಮಾರ್ಗದರ್ಶನ ಶಿಬಿರ
ಮೂಡುಬಿದಿರೆಯ ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆಯ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಸಮಾಜ ಮಂದಿರದಲ್ಲಿ ನಡೆಯಿತು. ಮಂಗಳೂರು ದಿಶಾ ಸೆಂಟರ್ ಫಾರ್ ಕ್ಯಾರಿಯರ್ ಕೌನ್ಸಿಲಿಂಗ್ ಆಂಡ್ ಟ್ರೈನಿಂಗ್ ನ ಸಂಪನ್ಮೂಲ ವ್ಯಕ್ತಿ ರಾಜೇಶ್ವರಿ ಶೆಟ್ಟಿ ಅವರು ವೃತ್ತಿ ಮಾರ್ಗದರ್ಶನದ ಕುರಿತು ಮಾತನಾಡಿ ಜೀವನದಲ್ಲಿ ವಿದ್ಯಾರ್ಥಿಗಳು ನಿರ್ದಿಷ್ಟವಾದ ಗುರಿಯನ್ನು ಹೊಂದಿರಬೇಕು.
ಗುರಿಯನ್ನಿಟ್ಟುಕೊಂಡರೆ ಸಾಲದು ಅದನ್ನು ತಲುಪಲು ಸತತ ಪ್ರಯತ್ನ ನಡೆಸಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿಗಳನ್ನು 5 ಗುಂಪುಗಳಾಗಿ ವಿಂಗಡಿಸಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಿ ವೃತ್ತಿ ಮಾರ್ಗದರ್ಶನದ ಬಗ್ಗೆ ಅರಿವು ಮೂಡಿಸಿದರು. ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆಯ ಅಧ್ಯಕ್ಷ ಜೇಕಬ್ ವರ್ಗೀಸ್ ಅಧ್ಯಕ್ಷತೆ ವಹಿಸಿದ್ದರು.
ನವಚೇತನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷೆ ವಸಂತಿ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕು. ಪ್ರಿಯಾ ನಿರೂಪಿಸಿದರು.