ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ ) ಇವರ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಮಾನ್ಯ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರು ಆಗಮಿಸಿ ಅಲ್ಲಿನ ಸಮಸ್ಯೆ ಕುರಿತು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಸಮಸ್ಯೆಗಳ ಕುರಿತು ಪರಿಹಾರ ಒದಗಿಸುವ ಭರವಸೆಯನ್ನು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಶ್ರೀ ಅಶೋಕ್ ಕುಮಾರ್ ಕೊಡವೂರು ಹಾಗೂ ಕಾರ್ಯಾಧ್ಯಕ್ಷರಾದ ಶ್ರೀ ಕಿಶನ್ ಹೆಗ್ಡೆ , ರಾಜ್ಯ ಆರ್ ಜಿ ಪಿ ಆರ್ ಎಸ್ ಸಂಘಟನೆಯ ಉಪಾಧ್ಯಕ್ಷರಾದ ಶ್ರೀಮತಿ ರೋಶನಿ, ಬ್ರಹ್ಮವರ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಡಾ. ಸುನಿತಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಚಿತ್ತರಂಜನ್ ಶೆಟ್ಟಿ ಉಡುಪಿ ಜಿಲ್ಲಾ ಮೀನುಗಾರಿಕಾ ಸಮಿತಿಯ ಅಧ್ಯಕ್ಷರಾದ ಶ್ರೀ ವಿಶ್ವಾಸ್ ಅಮೀನ್ , ಪೆರ್ಡೂರು ಗ್ರಾಮ ಪಂಚಾಯತಿಯ ಸದಸ್ಯರಾದ ಶ್ರೀ ನವೀನ್ ಸಾಲಿಯಾನ್, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.