ಆಲೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಾನಪದ ಸಂಗೀತ ಕಾರ್ಯಕ್ರಮ

ಆಲೂರು ತಾಲ್ಲೂಕಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕನ್ನಡ ವಿಭಾಗ ಆಲೂರು ಇವರ ಸಂಯುಕ್ತಾಶ್ರಯದೊಂದಿಗೆ ವಿಶೇಷ ಘಟಕ ಯೊಜನೆಯಡಿ ಜಾನಪದ ಸಂಗೀತ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಹೆಚ್.ಈ ದ್ಯಾವಪ್ಪ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ.ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ,ನಾಟಕ.ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು ಎಂದರು.

ಕಾಲೇಜಿನ ಪ್ರಾಧ್ಯಪಕರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಮಂಜಯ್ಯ ಡಿ.ಕೆ ಅವರು ಮಾತನಾಡಿ ಕಂಸಾಳೆ ಪದ, ಗೀಗಿಪದ, ಕೋಲಾಟದ ಪದ, ರಾಗಿ ಬೀಸೋ ಪದ, ಸುಗ್ಗಿ ಹಾಡುಗಳು, ಹೀಗೆ ಇನ್ನೂ ಅನೇಕ ವಿವಿಧ ಬಗೆಯ ಜಾನಪದ ಗೀತೆಗಳು ಆಯಾ ಪ್ರದೇಶದ ಜನರ ದೈನಂದಿನ ಚಟುವಟಿಕೆಗಳನ್ನು, ಕೌಟುಂಬಿಕ ಜೀವನವನ್ನು, ಸಂಬಂಧಗಳನ್ನು, ದೇವರುಗಳನ್ನು ಹಾಗೂ ಧಾರ್ಮಿಕ ಆಚರಣೆಗಳನ್ನು ನಮ್ಮ ಮುಂದೆ ತೆರೆದಿಡುತ್ತವೆ ಎಂದರು ದೇವರಾಜು ನೆರಲಕೆರೆ ತಂಡದೊಂದಿಗೆ ಹಾಡುಗಳ ಜೊತೆಗೆ ಉತ್ತಮ ಮನರಂಜನೆಯನ್ನು ಉಣಬಡಿಸಿದರು.

ಇದೇ ಸಂಧರ್ಭದಲ್ಲಿ ಹಾಸನ ಟ್ರಸ್ಟ್ ಸಂಸ್ಥಾಪಕರಾದ ಹರೀಶ್, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲ್ಲೂಕು ಉಪಾಧ್ಯಕ್ಷರು ಹಾಗೂ ಶಾಖಾ ಗ್ರಂಥಪಾಲಕರಾದ ನಾಗರಾಜ್.ಪತ್ರಿಕಾಮಾಧ್ಯಮ ಕಾರ್ಯದರ್ಶಿ ಪ್ರತಾಪ್ ಕುಮಾರ್ ಹೆಚ್.ಆರ್. ಪ್ರಾಂಶುಪಾಲರಾದ ಕೃಷ್ಣೇಗೌಡ.ಪ್ರಾಧ್ಯಪಕರುಗಳಾದ ಮೋಹನ್.ಶಿವಪ್ರಸಾದ್.ಮೋಹನ್.ಪುರುಷೋತ್ತಮ್. ಕಲಾತಂಡದ ಗಾಯಕರು.ಕಾಲೇಜಿನ ಸಿಬ್ಬಂದಿಗಳು.ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.