HomeFresh Newsಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆಳ್ವಾಸ್‌ಗೆ 20ನೇ ಬಾರಿಗೆ ಅವಳಿ ಪ್ರಶಸ್ತಿ

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆಳ್ವಾಸ್‌ಗೆ 20ನೇ ಬಾರಿಗೆ ಅವಳಿ ಪ್ರಶಸ್ತಿ

ಮೂಡಬಿದಿರೆ: ಮಂಗಳೂರಿನ ಬೆಸೆಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು.
ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜು ತಂಡವನ್ನು 35-13, 35-14 ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.
ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ಎನ್.ಎಂ. ಪದವಿಪೂರ್ವ ಕಾಲೇಜು ಅರಂತೋಡು ತಂಡವನ್ನು 35-11, 35-12 ಅಂಕಗಳಿAದ ಸೋಲಿಸಿ 20ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ಅಭಿನಂದಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments