HomeFresh Newsಹರಿದಾಸ- ಜಿನದಾಸ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ವಿಧಿವಶ

ಹರಿದಾಸ- ಜಿನದಾಸ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ವಿಧಿವಶ

ಅತ್ಯಂತ ವಿನೀತ, ಮೃದು ಭಾಷಿ,ಸಾತ್ವಿಕ ಮನೋಭಾವದ ಸಹೃದಯಿ ವಿದ್ವಾಂಸ ಹರಿದಾಸ ಅಂಬಾತನಯ ಮುದ್ರಾಡಿ (88) ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. ಶಿಕ್ಷಕ, ಹರಿದಾಸ,ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಪ್ರವಚನಕಾರ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ,ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿ ಸಾರ್ಥಕವಾಗಿ ಬದುಕನ್ನು ಪೂರೈಸಿದ ಅಂಬಾತನಯರದ್ದು ಆದರ್ಶ ಜೀವನ. ಕಳೆದ ವಾರ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡದ್ದು ಅವರ ಕೊನೆಯ ಕಾರ್ಯಕ್ರಮವಾಗಿತ್ತು. ಈ ಸಂದರ್ಭದಲ್ಲಿ ‘ಯಕ್ಷಗಾನ ಮತ್ತು ಹರಿಕಥೆ ಒಂದು ತೌಲನಿಕ ಅಧ್ಯಯನ’ ಪುಸ್ತಕವನ್ನು ಪ್ರಕಟಿಸಲಾಗಿತ್ತು. ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅವರಿಗೆ ಅರ್ಹವಾಗಿ ಪ್ರಾಪ್ತಿಯಾಗಿವೆ.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ. ಪತ್ನಿ, ಮೂವರು ಪುತ್ರರು,ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ವ್ರಂದವನ್ನು ಅಗಲಿದ್ದಾರೆ.ಉಡುಪಿ ಯಕ್ಷಗಾನ ಕಲಾರಂಗವು ಅವರನ್ನು ಗೌರವಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments