ಬಂಟ್ವಾಳ : ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಎರಡು ದಿನಗಳ ಕಾಲ ನಡೆಯುವ ಬಂಟ್ವಾಳ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ಶನಿವಾರದಂದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ನಿವೃತ್ತ ಪ್ರಾಂಶುಪಾಲ ಹಾಗೂ ಹಿರಿಯ ಪತ್ರಕರ್ತ ಪ್ರೊ.ಬಾಲಕೃಷ್ಣ ಗಟ್ಟಿ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಅಮ್ಮುಂಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಡರು ದಿನಗಳ ಕಾಲ ನಡೆಯುವ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶನಿವಾರ ಸಂಜೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಉದ್ಘಾಟಿಸಿದರು.

ಹಿರಿಯ ಪತ್ರಕರ್ತ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ.ಬಾಲಕೃಷ್ಣ ಗಟ್ಟಿ ಅವರು ಸಮ್ಮೇಳನದ ಅಧ್ಯಕ್ಷರಾಗಿ ಸಮ್ಮೇಳನವನ್ನು ಮುನ್ನಡೆಸಿದರು.
ಸಮ್ಮೇಳ ಉದ್ಘಾಟನೆಗೆ ಮೊದಲು ಕರುಣಾಕರ ಆಳ್ವ ಅಮ್ಮುಂಜೆಗುತ್ತು ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಅವರು ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರು ಕನ್ನಡ ಧ್ವಜಾರೋಹಣ ಮಾಡಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಸುಗುಣಾ ಸಂಕಪ್ಪ ಶೆಟ್ಟಿ, ಶಿಕ್ಷಕ ಹರೀಶ್ ರಾವ್ , ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ , ಪದಾಧಿಕಾರಿಗಳಾದ ವಿ.ಸುಬ್ರಹ್ಮಣ್ಯ ಭಟ್ , ರಮಾನಂದ ನೂಜಿಪ್ಪಾಡಿ , ಡಿ.ಬಿ. ಅಬ್ದುಲ್ ರಹಮಾನ್ , ಗಣೇಶ್ ಪ್ರಸಾದ್ ಪಾಂಡೇಲು , ಪಿ. ಮಹಮ್ಮದ್ , ಜನಾರ್ದನ ಅಮ್ಮುಂಜೆ , ಅಬೂಬಕರ್ ಅಮ್ಮುಂಜೆ , ಡಾ. ಮಂಜಯ್ಯ ಶೆಟ್ಟಿ, ಶಂಕರ ಶೆಟ್ಟಿ, ಸೇಸಪ್ಪ ಕೋಟ್ಯಾನ್ , ಜೀವರಾಜ ಶೆಟ್ಟಿ, ದೇವದಾಸ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.