ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ

ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಆನೆ ಮಾನವ ಸಂಘರ್ಷ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಹಿರಿಯ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ನಿಯಂತ್ರಣ ಕ್ರಮಗಳ ಕುರಿತು ವರದಿ ಪಡೆಯಲಾಗುವುದು ಎಂದರು.
