ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿ ಬಂಟ್ವಾಳದ ಅನಿಲ್ ಸಿಕ್ವೇರಾ ಆಯ್ಕೆ

ಬಂಟ್ವಾಳ ತಾಲೂಕಿನ ಅನಿಲ್ ಜಾನ್ ಸಿಕ್ವೇರಾ ತನ್ನ 25ನೇ ವಯಸ್ಸಿನಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ರಾಜ್ಯದ ಅತ್ಯಂತ ಚಿಕ್ಕ ವಯಸ್ಸಿನ ನ್ಯಾಯಾಧೀಶ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಮೂಲಕ ಕರಾವಳಿ ಜಿಲ್ಲೆಯ ಅನಿಲ್ ಅಪರೂಪದ ಸಾಧಕರಾಗಿ ಗುರುತಿಸಲ್ಪಟ್ಟಿದ್ದಾರೆ.

ಅನಿಲ್ ಜಾನ್ ಸಿಕ್ವೇರಾ ಅವರು ಪ್ರಿಲಿಮ್ಸ್, ಮೇನ್ಸ್ ಹಾಗೂ ಸಂದರ್ಶನ ಹೀಗೆ 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸದ್ಯ ಸಿವಿಲ್ ನ್ಯಾಯಧೀಶರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಅನಿಲ್ ಜಾನ್ ಡಿಸೋಜ ಪರಿಶ್ರಮಿ. ಏಕಾಗ್ರತೆಯಿಂದ ಕಲಿತಿದ್ದಾರೆ. ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಇಂದು ತನ್ನ 25ನೆ ಹರೆಯದಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾಗಿರುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಮಂಗಳೂರಿನ ನ್ಯಾಯವಾದಿ ದೀಪಕ್ ಡಿಸೋಜ ತಿಳಿಸಿದ್ದಾರೆ.

ಮಂಗಳೂರು ಬಾರ್ ಅಸೋಸಿಯೇಶನ್‌ನ ಸದಸ್ಯರೂ ಆಗಿದ್ದ ಅನಿಲ್ ಜಾನ್ ಸಿಕ್ವೇರಾ, ಅನಿಲ್ ಅವರು ದೀಪಕ್ ಡಿಸೋಜರ ಬಳಿ ಮಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದರು.

Related Posts

Leave a Reply

Your email address will not be published.