ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಅವರಿಗೆ ವರ್ಗಾವಣೆ

ಸುಳ್ಯ:ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಅವರಿಗೆ ವರ್ಗಾವಣೆಯಾಗಿದೆ.ಮುಂಬರುವ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್‌ಗಳ ವರ್ಗಾವಣೆಯಾಗಿದ್ದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸುಳ್ಯಕ್ಕೆ ತಹಶೀಲ್ದಾರ್ ನೇಮಕ ಆದೇಶ ಇನ್ನಷ್ಟೇ ಆಗಬೇಕಾಗಿದೆ.ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ತಾಲೂಕುಗಳ ತಹಶೀಲ್ದಾರ್‌ರನ್ನು ವರ್ಗಾವಣೆ ಮಾಡಲಾಗಿದೆ.
