ಎನ್‍ಎಸ್‍ಎಸ್ ಸ್ವಯಂ ಸೇವಕರಿಗೆ ವಾರ್ಷಿಕ ಪ್ರಶಸ್ತಿ ವಿತರಣೆ

ಯೆನೆಪೋಯ ದಂತ ಮಹಾವಿದ್ಯಾಲಯದ 2017ನೇ ಬಿಡಿಎಸ್ ಬ್ಯಾಚ್‍ನ ಎನ್‍ಎಸ್‍ಎಸ್ ಸ್ವಯಂ ಸೇವಕರಿಗೆ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಯೆನೆಪೋಯ ದಂತ ಮಹಾವಿದ್ಯಾಲಯದ 5ನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಎನ್‍ಎಸ್‍ಎಸ್ ಸ್ವಯಂ ಸೇವಕರಾದ ಎಂ.ಎಸ್. ಝೀಭಾ ಅವರು ಸ್ವಾಗತ ಭಾಷಣ ಮಾಡಿದರು. ಎಂ.ಎಸ್. ಫಾತಿಮತ್ ಇಶಾನ ಅವರು ವಾರ್ಷಿಕ ವರದಿ ವಾಚಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪೊಲೀಸ್ ಅಧಿಕಾರಿ ಗೀತಾ ಕುಲಕರ್ಣಿ ಅವರು ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿದ ವಿವಿಧ ಸ್ವಯಂ ಸೇವಾ ಸಂಸ್ಥೆಗಳನ್ನು ಪರಿಚಯಿಸಿದರು. ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ವಿದ್ಯಾರ್ಥಿ ಪೊಲೀಸ್ ಕೆಡೆಟ್‍ಗೆ ಒತ್ತು ನೀಡಬೇಕೆಂದು ಹೇಳಿದರು.


ಯೆನೆಪೋಯ ದಂತ ವಿದ್ಯಾಲಯದ ಡೀನ್ ಡಾ. ಶಾಮ್ ಎಸ್. ಭಟ್ ಅವರು ಗೌರವ ಅತಿಥಿಗಳಾಗಿದ್ದು.
ಇದೇ ವೇಳೆ 2017ರ ಬ್ಯಾಚ್‍ನ ಸ್ವಯಂ ಸೇವಕರಿಗೆ ಪ್ರಮಾಣ ಪತ್ರ ನೀಡಲಾಯಿತು.ಯೆನೆಪೋಯ ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಲಕ್ಷ್ಮೀಕಾಂತ್ ಚಾತ್ರ, ಯೆನೆಪೋಯ ದಂತ ಮಹಾವಿದ್ಯಾಲಯದ ಎನ್‍ಎಸ್ ಎಸ್ ಸ್ವಯಂ ಸೇವಕಿ ಅಯ್ಷಾ ಶೀನ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.