ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವ: ಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ

ಕ್ರೀಡೆ ಎಂಬುದು ಆರೋಗ್ಯಕ್ಕೆ ಪೂರಕ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕ್ರೀಡಾಪಟು, ಫೀಲ್ಡ ಮಾರ್ಷಲ್ ಕಾರ್ಯಪ್ಪ ಪದವಿ ಕಾಲೇಜು ಮಡಿಕೇರಿ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ. ಎವರೆಸ್ಟ್ ರೋಡ್ರಿಗಸ್ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾರ್ಚ್ 27 ಮತ್ತು 28ರಂದು ನಡೆದ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಉತ್ತಮ ಆಹಾರ ಮತ್ತು ದೈಹಿಕ ಚಟುವಟಿಕೆಗಳು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಅವಶ್ಯಕ.

ಮುಖ್ಯವಾಗಿ ಹೆಣ್ಣು ಮಕ್ಕಳು ಆರೋಗ್ಯವಂತರಾಗಿದ್ದರೆ ನಮ್ಮ ಮುಂದಿನ ಪೀಳಿಗೆ ಆರೋಗ್ಯಯುತವಾಗಿರುತ್ತದೆ ಎಂದರು.
ಸಭೆಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಇವರು ಕ್ರೀಡಾಪಟುಗಳಿಗೆ ಪ್ರೋತ್ಸಾಹದ ನುಡಿಗಳನ್ನಾಡಿ ಕ್ರೀಡೋತ್ಸವಕ್ಕೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ ಎಂ ಅಧ್ಯಕ್ಷತೆ ವಹಿಸಿದ ಸಭಾವೇದಿಕೆಯಲ್ಲಿ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಮಾಣಿಬೆಟ್ಟು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ನ್ಯಾಕ್ ಸಂಯೋಜಕಿ ಡಾ. ಮಮತಾ ಕೆ, ಕಾಲೇಜು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶಶ್ಮಿ ಭಟ್, ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮಧುರಾ ಎಂ ಆರ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ನಾಯಕ ಆದಿತ್ಯ ಡಿ ಕೆ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಕು. ಉಜಾನ ಅತಿಥಿಗಳನ್ನು ಪರಿಚಯಿಸಿ, ಕ್ರೀಡಾ ಕಾರ್ಯದರ್ಶಿ ಕು. ತೃಪ್ತಿ ಪ್ರಮಾಣ ವಚನ ಬೋಧಿಸಿದರು. ಕಾರ್ಯದರ್ಶಿ ಸೂರ್ಯದರ್ಶನ್ ಧನ್ಯವಾದ ಸಮರ್ಪಿಸಿದರು. ಕು. ಶ್ರೀಲಯ ಪ್ರಾರ್ಥಿಸಿ, ಕು. ಗಾನ ಮತ್ತು ಕು. ಅನ್ವಯ ಕಾರ್ಯಕ್ರಮ ನಿರೂಪಿಸಿದರು.


ಆಕರ್ಷಕ ಪಥಸಂಚಲನ ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳು ದೈಹಿಕ ಶಿಕ್ಷಕರಾದ ಲೆ. ಸೀತಾರಾಮ ಎಂ. ಡಿ ಮತ್ತು ಕಾಲೇಜಿನ ಉಪನ್ಯಾಸಕ ವೃಂದದವರ ನೇತೃತ್ವದಲ್ಲಿ ನಡೆಯಿತು. ಉಪಸ್ಥಿತ ಗಣ್ಯರಿಂದ ವಿಜೇತರಿಗೆ ವಿಜಯ ವೇದಿಕೆಯಲ್ಲಿ ಪ್ರಶಸ್ತಿ ವಿತರಿಸಲಾಯಿತು.
ಕ್ರೀಡೋತ್ಸವದ ಅಂಗವಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಕೆ. ಟಿ. ವಿಶ್ವನಾಥ್, ಉಪಾಧ್ಯಕ್ಷ ದೊಡ್ಡಣ್ಣ ಬರೆಮೇಲು, ಪ್ರಧಾನ ಕಾರ್ಯದರ್ಶಿ ಮಧುರಾ ಎಂ ಆರ್, ಹಿರಿಯರಾದ ಪ್ರಭಾಕರ ರೈ ಹಾಗೂ ಸಂಘದ ಪ್ರತಿನಿಧಿಗಳು ಮತ್ತು ಸದಸ್ಯರು ಭಾಗವಹಿಸಿದರು. ರಾಷ್ಟ್ರೀಯ ಕಬಡ್ಡಿ ತರಬೇತುದಾರರಾದ ನಾಗರಾಜ್ ಮತ್ತು ದೈಹಿಕ ಶಿಕ್ಷಕ ಮಿತನ್ ಹಾಗೂ ಕಾಲೇಜಿನ ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಸಹಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು.