HomeFresh Newsಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

ಪಡುಬಿದ್ರಿ:ಆ. 4: ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಜನರನ್ನು ಕಾಡುತ್ತಿರುವ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಕರ್ನಾಟಕ ಲೋಕೋಪಯೋಗಿ (PWD) ಸಚಿವರಾದ ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ವಿನಯ್ ಕುಮಾರ್ ಸೊರಕೆ ನೇತೃತ್ವದ ಹೆಜಮಾಡಿ–ಪಡುಬಿದ್ರಿ ಟೋಲ್ ಹೋರಾಟ ಕಾರ್ಯಕಾರಿ ಸಮಿತಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, ಹೆಜಮಾಡಿ ಮತ್ತು ಪಡುಬಿದ್ರಿ ಭಾಗದ ಸಾರ್ವಜನಿಕರು ಟೋಲ್ ಸಂಗ್ರಹಣೆಯಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸ್ಥಳೀಯ ನಿವಾಸಿಗಳಿಗೆ ಶಾಶ್ವತ ಟೋಲ್ ವಿನಾಯಿತಿ, ಜನಸ್ನೇಹಿ ವ್ಯವಸ್ಥೆ ಹಾಗೂ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್, ಕೆಪಿಸಿಸಿ ಕೋಆರ್ಡಿನೇಟರ್‌ಗಳಾದ ನವೀನ್ ಚಂದ್ರ ಜೆ. ಶೆಟ್ಟಿ ಹಾಗೂ ಅಬ್ದುಲ್ ಅಜೀಜ್ ಹೆಜಮಾಡಿ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರಭೋದ್ ಚಂದ್ರ ಹೆಜಮಾಡಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೀಜ್ ಹುಸೇನ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್ ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೇಶವ್ ಸಿ. ಸಾಲ್ಯಾನ್,ಲಕ್ಷ್ಮೀಶ ತಂತ್ರಿ ಉಪಸ್ಥಿತರಿದ್ದರು.

ನಿಯೋಗವು ಹೆಜಮಾಡಿ–ಪಡುಬಿದ್ರಿ ಭಾಗದ ಜನರ ನ್ಯಾಯಸಮ್ಮತ ಬೇಡಿಕೆಗಳನ್ನು ಸಚಿವರ ಮುಂದಿಟ್ಟು, ಸಮಸ್ಯೆಗೆ ಶೀಘ್ರ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿತು.

ಜನರ ಹಕ್ಕಿಗಾಗಿ ಕಾಂಗ್ರೆಸ್ ಹೋರಾಟ ನಿರಂತರವಾಗಿದ್ದು, ನ್ಯಾಯ ದೊರೆಯುವವರೆಗೆ ಹೆಜಮಾಡಿ–ಪಡುಬಿದ್ರಿ ಟೋಲ್ ಹೋರಾಟ ಕಾರ್ಯಕಾರಿ ಸಮಿತಿಯ ಹೋರಾಟ ಮುಂದುವರಿಯಲಿದೆ ಎಂದು ಕಾಂಗ್ರೆಸ್ ಮುಖಂಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments