HomeFresh Newsಅಪಘಾತ- ಖ್ಯಾತ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ ಕಾಲಿಗೆ ಗಾಯ

ಅಪಘಾತ- ಖ್ಯಾತ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ ಕಾಲಿಗೆ ಗಾಯ

ಮಂಗಳೂರು:  ಖ್ಯಾತ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಗರದ ಪಂಪ್‌ವೆಲ್ ಬಳಿ ಸ್ಕಿಡ್ಡಾಗಿ ಉರುಳಿ ಬಿದ್ದ ಪರಿಣಾಮ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತೀ ವೇಗವಾಗಿ ಬರುತ್ತಿದ್ದ ಬಸ್‌  ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ  ತಾನು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ಬ್ರೇಕ್ ಹಾಕಿದ್ದು, ಈ ಸಂದರ್ಭ ಸ್ಕಿಡ್ಡಾಗಿ ಬಿದ್ದು  ಬೋಳಾರ್‌ ಕಾಲಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅರವಿಂದ್ ಬೋಳಾರ್‌ರ ಕಾಲಿನ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments