20ಕ್ಕೂ ಅಧಿಕ ಪ್ರಕರಣದ ವಾರಂಟ್ ಆರೋಪಿಯ ಬಂಧನ

ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ
ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ.
ಖಚಿತ ಮಾಹಿತಿ ಆಧಾರದಲ್ಲಿ ಉಪ್ಪಿನಂಗಡಿ ಠಾಣಾ ಹೆಚ್‌ಸಿ 826 ಶಿವರಾಮ ರೈ, ಕಡಬ ಪೊಲೀಸ್ ಠಾಣಾ ಹೆಚ್ ಸಿ 1028 ಗಣೇಶ್ ಎನ್ ಎಂಬವರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.
ಫಾರೂಕ್ ಯಾನೆ ಉಮ್ಮರ್ ಫಾರೂಕ್ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ:38/20 ថ໐: 457,380 22, 39/2020 : 380,201, 34 ಐ ಪಿ ಸಿ, 48/2012 : 379,201,34ಐ ಪಿ ಸಿ,2,119/2020 ಕಲಂಃ 457,380 ಐಪಿಸಿ. ಕಡಬ ಪೊಲೀಸ್ ಠಾಣೆಯಲ್ಲಿ . 43/2020,44/2020,45/2020,46/2020 : 457,380 ಐಪಿಸಿ ಮತ್ತು ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೊಣಾಜೆ, ಬರ್ಕೆ, ಬಜಪೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.