ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು, ಶುಭಕೋರಿದರು.
ತಮ್ಮ ನೆಚ್ಚಿನ ನಾಯಕ ಶಾಸಕರಾಗಿ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕಾರ್ಯಕರ್ತರು ಹಾಗೂ ಮುಖಂಡರು, ಹೂಹಾರ ಹಾಕಿ, ಸಿಹಿ ಹಂಚಿ ಸಂಭ್ರಮಸಿದರು.
