ಸರಕಾರದಿಂದ ನಾಮನಿರ್ದೇಶನಗೊಂಡ ವಿವಿಧ ಸಮಿತಿಗಳ ಸದಸ್ಯರಿಗೆ ಮಾಹಿತಿ ಕಾರ್ಯಗಾರ

ಸರಕಾರದಿಂದ ನಾಮನಿರ್ದೇಶನಗೊಂಡ ವಿವಿಧ ಸಮಿತಿಗಳ ಸದಸ್ಯರಿಗೆ ಮಾಹಿತಿ ಕಾರ್ಯಗಾರವು ಪುತ್ತೂರು ಶಾಸಕರ ಕಚೇರಿಯಲ್ಲಿ ನಡೆಯಿತು.
ಶಾಸಕ ಅಶೋಕ್ ಕುಮಾರ್ ರೈ ಕಾರ್ಯಗಾರವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಕ್ಷೇತ್ರದ ಜನರ ಸೇವೆ ಮಾಡುವ ಉದ್ದೇಶದಿಂದ ಸರಕಾರದಿಂದ ವಿವಿಧ ಸಮಿತಿಗಳ ರಚನೆ ಮಾಡಲಾಗಿದ್ದು, ಸಮಿತಿಯ ಪ್ರತಿಯೊಬ್ಬ ಸದಸ್ಯರೂ ತಮ್ಮ ಸಮಿತಿಯ ಕಾರ್ಯವೈಖರಿಯನ್ನು ತಿಳಿದುಕೊಂಡು ಕೆಲಸ ಮಾಡಬೇಕು ಎಂದರು.
ಸರಕಾರದಿಂದ ನಾಮ ನಿರ್ದೇಶನಗೊಂಡಿರುವ ಮೆಸ್ಕಾಂ, ಆರೋಗ್ಯ, ರಕ್ಷಾ ಸಮಿತಿ, ಅಕ್ರಮ, ಸಕ್ರಮ ಸಮಿತಿ, ಶಾಲಾ ಅಭಿವೃದ್ಧಿ ಸಮಿತಿ, ಆಶ್ರಯ ಸಮಿತಿ, ಧಾರ್ಮಿಕ ದತ್ತಿ ಇಲಾಖಾ ಸಮಿತಿ, ತುಳು ಒಕ್ಕೂಟ ಸಮಿತಿ, ಧಾರ್ಮಿಕ ಪರಿಷತ್ ಸಮಿತಿ, ನಗರಸಭ ನಾಮ ನಿರ್ದೇಶಿತ ಸದಸ್ಯರುಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ರು.
